ರಾಯಚೂರು. ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಶವ, ನಗರದ ಹೊರವಲಯದ ಯರಮರಸ್ ಹತ್ತಿರದ ಬೈಪಾಸ್ ಬಳಿ ಪತ್ತೆಯಾಗಿರುವ ಘಟನೆ ನಡೆದಿದೆ.
ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾ ಗಿದೆ. ಸುಮಾರು 35-40ವರ್ಷದ ಮಹಿಳೆ ಶವ ಎಂದು ಗುರುತಿಸಲಾಗಿದೆ.
ಕಳೆದ 3-4 ದಿನಗಳ ಹಿಂದೆಯೇ ಘಟನೆ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಹಾಗೂ ಹೆಚ್ಚುವರಿ ಎಸ್ ಪಿ ಮತ್ತು ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಈ ಕುರಿತು ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.