ರಾಯಚೂರು. ಸರಕಾರಿ ಶಾಲೆಗಳಲ್ಲಿ 2024 – 25ನೇ ಶೈಕ್ಷಣಿಕ ಸಾಲಿನಲ್ಲಿ 1 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಂದು ಜತೆ ಶೂ ಮತ್ತು ಎರಡು ಜತೆ ಸಾಕ್ಸ್ ಖರೀದಿಸಲು ಆಯಾ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ (ಎಸ್‌ಡಿಎಂಸಿ) ವಹಿಸಿದೆ ಆದರೆ ಖರೀದಿಸಿದ ಶೂ ಮತ್ತು ಸಾಕ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡದೇ ಖಾಸಗಿ ಯವರಿಗೆ ನೀಡಿದ್ದು, ಸರ್ಕಾರಿಗೆ ಸೇರಿದೆ ಎಂದು
ಅವುಗಳನ್ನು ರಸ್ತೆಯಲ್ಲಿ ಬಿಸಾಡಿದ್ದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಾಗಿದೆ.
ಹೌದು ಸರ್ಕಾರ ಪ್ರತಿ ವರ್ಷ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್‌ಗಳನ್ನು ಆಯಾ ಶಾಲಾ ಎಸ್‌ಡಿಎಂಸಿಗಳಿಗೆ ಅನುದಾನ ಬಿಡುಗಡೆ ಮಾಡಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲು ಹೇಳಿದೆ. ಎಸ್‌ಡಿಎಂಸಿ ಮಂಡಳಿಯು ಖರೀದಿ ಸಿದ್ದು, ವಿತರಣೆ ಮಾಡದೇ ಖಾಸಗಿ ವ್ಯಕ್ತಿಗೆ ಮಾರಾಟಕ್ಕೆ ನೀಡಿದ್ದು ಅವುಗಳನ್ನು ರಸ್ತೆಯಲ್ಲಿ ಬಿಸಾಡಿದ್ದಾರೆ.
ಈ ಶೂ ಮತ್ತು ಸಾಕ್ಸ್‌ಗಳು ಕೆಇಬಿ ಶಾಲೆಗೆ ಸೇರಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 1 ರಿಂದ 10 ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಿತರಣೆ ಮಾಡಬೇಕಾದ ಸಾವಿರಾರು ಶೂ ಸಾಕ್ಸ್ ಗಳನ್ನು ರಸ್ತೆಯಲ್ಲಿ ಬಿಸಾಡಿದ್ದಾರೆ.
ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಎತ್ತಿಕೊಂಡು ಹೋಗಿದ್ದಾರೆ.
ಶಾಲಾ ಆಡಳಿತ ಮಂಡಳಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಚಿತವಾಗಿ ವಿದ್ಯಾರ್ಥಿಗಳಿಗೆ ನೀಡಲು ಬದಲಿಗೆ ಮಾರಾಟಕ್ಕೆ ನೀಡಿದ್ದು ಶೂ ಸಾಕ್ಸ್ ನಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಗಮನ ಹರಿಸಿ ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.