ಬೆಳಗಾವಿ: ಕೊಳವೆ ಬಾವಿಗಳನ್ನು ಸಮರ್ಪಕ ವಾಗಿ ಮುಚ್ಚದೇ ಇರುವಿದರಿಂದ ಚಿಕ್ಕ ಮಕ್ಕಳು ಬಿದ್ದು ಸಾಕಷ್ಟು ಅನಾವುಗಳು ಸಂಬವಿಸಿವೆ, ಇಂತಹ ಘಟನೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊ ಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯ ನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಮಸೂದೆ ಮಂಡಿಸಿ ವಿಧಾನಸ ಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು.
ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸ ಭೇಯಲ್ಲಿ ಮಸೂದೆ ಅಂಗಿಕಾರವಾದ ನಂತರ ಪ್ರತಿಕ್ರಿಯೆ ನೀಡಿದರು. ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇರುವ ಮೂಲಕ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳಿಗೆ ಬ್ರೇಕ್ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಲಾ ಗಿದ್ದು ಇಂದು ವಿಧಾನಸಭೇಯಲ್ಲಿ ಅಂಗೀಕಾರವಾಗಿದೆ.