ರಾಯಚೂರು:- ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವಿವಿಧ ಇಲಾಖೆ ವತಿಯಿಂದ ರಾಯಚೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಕಾರ್ಡ್ ಸೃಜನ ಮಾಡುವ ಅಭಿಯಾನ ಕಾರ್ಯಕ್ರಮವನ್ನು ರಾಯಚೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಅಭಿಯಾನ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲೆಯು 12000 ಸಾವಿರಕ್ಕೂ ಮೇಲ್ಪಟ್ಟು ಎಬಿಪಿಎಂಜೆ ವೈ ಸಿ ಎಂ ಆರೋಗ್ಯ ಕರ್ನಾಟಕ ಕಾರ್ಡುಗಳನ್ನು ಸೃಜನೆ ಮಾಡಲಾಗಿದ್ದು ಇದಕ್ಕೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಪ್ರಂಶಸನೆ ವ್ಯಕ್ತಪಡಿಸಿದ್ದು, ಮೊದಲನೇ ದಿನದ ಪ್ರಗತಿ ಸಾಧಿಸಲು ಸಹಕರಿಸಿದಂತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಾಗೂ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಮತ್ತು ಆರೋಗ್ಯ ಇಲಾಖೆ, ಹಾಗೂ ಸ್ವಯಂಸೇವಾ ಸಂಘದವರಿಗೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಮುಂದುವರೆದು ಇದೇ ರೀತಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಡುಗಳನ್ನು ಸೃಜನೆ ಮಾಡಲು ಎಲ್ಲ ಇಲಾಖೆ ಮತ್ತು ಸ್ವಯಂ ಸೇವಾ ಸಂಘದವರು ಸಹಕರಿಸುವಂತೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.