ರಾಯಚೂರು: ನಾರಾಯಪೂರ ಜಲಾಶಯ ದಿಂದ ಕೃಷ್ಣಾ ನದಿಗೆ 2.43 ಲಕ್ಷ ಕ್ಯುಸೆಕ್ ನೀರು ಹರಿಸಿದ್ದರಿಂದ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.
ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆಯಾಗಿದ್ದು,
ಒಳಹರಿವು ಹೆಚ್ಚಳವಾಗುತ್ತಿರುವುರಿಂದ ಹೆಚ್ಚು
ನೀರು ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಅಪಾರ ಪ್ರಮಾಣದ ನೀರಿನಿಂದ ಕೃಷ್ಣಾ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹ ಭೀತಿ ಎದುರಿ ಸುತ್ತಿದ್ದಾರೆ. ಲಿಂಗಸುಗೂರಿನ ಶೀಲಹಳ್ಳಿ, ಹಂಚಿನಾಳ ಮಧ್ಯ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿರುವುದರಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ನದಿ ತೀರದ ಕಡದರಗಡ್ಡಿ, ಯರಗೋಡಿ, ಹಂಚಿನಾಳ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕುಗಳಿಗೆ ಪ್ರವಾಹ ಭೀತಿ ಎದುರಾಗಿದೆ.