ರಾಯಚೂರು. ರಾಜ್ಯ ಸರ್ಕಾರದ ಪ್ರಸಕ್ತ ಆಯವ್ಯಯ ಮಂಡಿಸಿದ್ದು ರಾಯಚೂರು ಜಿಲ್ಲೆಗೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ 220 ಕೋಟಿ ಹಾಗೂ ಎಪಿಎಂಸಿಯಲ್ಲಿ ಒಣ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣಕ್ಕೆ 25 ಕೋಟಿ ರೂ. ಘೋಷಣೆ ಮಾಡಿದ್ದಾರೆ.
ಪ್ರಸಕ್ತ ಅಯ್ಯ ವ್ಯಯವನ್ನು ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ರಾಯಚೂರು ಜಿಲ್ಲೆಗೆ ಕೆಲವೇ ಹೊಸ ಯೋಜನೆಗಳು ನೀಡಿದ್ದಾರೆ, ಅವುಗಳನ್ನು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶಿಥಿಲ ಗೃಹಗಳ ನಿರ್ಮಾಣಕ್ಕೆ 40 ಕೋಟಿ, ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಇತರೆ ಪ್ರದೇಶಗಳಿಗೆ ನಾರಾಯಣಪೂರ ಬಲದಂಡೆ ಕಾಲುವೆಯಿಂದ 990 ಕೋಟಿ ರೂ, ನೀರಾವರಿ ಕಲ್ಪಿಸುವ ಯೋಜನೆ ಕೈಗೆತ್ತಿಕೊಳ್ಳಲಾಗುತ್ತದೆ,
ಚೀಕಲಪರ್ವಿ ಗ್ರಾಮದಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಜ್ ಕಂ ಬ್ಯಾರೆಜ್ ನಿರ್ಮಾಣ, ಕುರ್ಡಿ ಕೆರೆ ತುಂಬವ ಯೋಜನೆ, ಜಿಲ್ಲಾಸ್ಪತ್ರೆಯಲ್ಲಿ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ, ರಾಯಚೂರಿನಲ್ಲಿ ಮಹಿಳಾ ಮಿಲ್ಕ್ ಬ್ಯಾಂಕ್ ಸ್ಥಾಪನೆ, ಜವಳಿ ಪಾರ್ಕ್ ಸ್ಥಾಪನೆ, ವಿಜ್ಞಾನ ಕೇಂದ್ರ ತಾರಾಲಯ ಸ್ಥಾಪನೆ, ಮಂತ್ರಾಲಯ ಹತ್ತಿರದ ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸುವ ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ಬ್ರಿಜ್ ಕಂ ಬ್ಯಾರೆಜ್ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 158 ಕೋಟಿ ರೂ.ನಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಬಜೆಟ್ ನಲ್ಲಿ ತಿಳಿಸಿದ್ದಾರೆ.