ಬೆಂಗಳೂರು. ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.
ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.