ರಾಯಚೂರು. ಅನ್ನ ಭಾಗ್ಯದ ಅಕ್ಕಿಯನ್ನು ಪಡಿತರದಾರರಿಗೆ ವಿತರಣೆ ಮಾಡದೇ ರೈಸ್ ಮೀಲ್ ಅಕ್ರಮವಾಗಿ ಸಂಗ್ರಹ ಮಾಡಿರುವುದು ಮಾಹಿತಿ ಮೇರೆಗೆ ಆಹಾರ ಇಲಾಖೆ, ಪೊಲೀಸ್ ಇಲಾಖೆಯ ಸಿಬ್ಬಂದಿ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಸಿರವಾರ ತಾಲೂಕಿನ ಚೀಕಲಪರ್ವಿ ರಸ್ತೆಯಲ್ಲಿ ವೆಂಕಟಸಾಯಿ ಎನ್ನುವವರಿಗೆ ಸೇರಿದ ರೈಸ್ ಮಿಲ್ ಸಂಗ್ರಹ ಮಾಡಿದ್ದು ಖಚಿತ ಮಾಹಿತಿ ಮೇರೆಗೆ ಎರಡು ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ವೇಳೆ ರೈಸ್ ಮಿಲ್ನಲ್ಲಿದ್ದ 31 ಕ್ವಿಂಟಾಲ್ ಅನ್ನಭಾಗ್ಯದ ಅಕ್ಕಿಯನ್ನ ಜಪ್ತಿ ಮಾಡಿಕೊ ಳ್ಳಲಾಗಿದೆ..ಬಡವರಿಗೆ ಹಂಚಿಕೆ ಮಾಡಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಆಹಾರ ಇಲಾಖೆಯ ಅಧಿಕಾರಿ ದೇವರಾಜು ಹಾಗೂ ಮಾನ್ವಿ ಪೊಲೀಸ್ ಠಾಣೆ ಪಿಎಸ್ಐ ವಿರೇಂದ್ರಯ್ಯ ಹಿರೇಮಠ ನೇತೃತ್ವದಲ್ಲಿ ದಾಳಿ ಮಾಡಿ 31 ಕ್ವಿಂಟಾಲ್ ಅಕ್ಕಿಯನ್ನ ವಶಕ್ಕೆ ಪಡೆಯಲಾಗಿದೆ.
ಆಹಾರ ಮತ್ತು ನಾಗರೀಕ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.