Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವಕ್ಕೆ ಗೋಪೂಜೆ ಮೂಲಕ ಚಾಲನೆ

ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವಕ್ಕೆ ಗೋಪೂಜೆ ಮೂಲಕ ಚಾಲನೆ

ರಾಯಚೂರು. ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ನಿಮಿತ್ತ ಸಪ್ತ ರಾತ್ರೋತ್ಸವಕ್ಕೆ ಮಂಗಳವಾರ ರಾತ್ರಿ ವಿಧ್ಯುಕ್ತವಾಗಿ ಮಠದ ಪೀಠಾಧಿಪತಿ ಸುಬು ಧೇಂದ್ರ ತೀರ್ಥರು ವಿಧ್ಯುಕ್ತ ಚಾಲನೆ ನೀಡಲಾಯಿತು.

ಮೊದಲು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ, ಗೋ ಪೂಜೆ, ಅಶ್ವಪೂಜೆ, ಧಾನ್ಯ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿವಿಧ ಸೇವಾ ಕೇಂದ್ರಗಳ ಕಚೇರಿಗಳ ಪೂಜೆ ನೆರವೇರಿಸಲಾಯಿತು.
ಭಾರಿ ಸಂಖ್ಯೆಯಲ್ಲಿ ಭಕ್ತರು ತುಂಗಭದ್ರಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿ ರಾಯರ ದರ್ಶನ ಪಡೆದರು.
ಮಠದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ವಸ್ತ್ರಗಳನ್ನು ವಿತರಿಸಲಾಯಿತು. ಮಠದ ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸರಾವ್, ಸಹಾಯಕ ವ್ಯವಸ್ಥಾಪಕ ಐ.ಪಿ.ನರಸಿಂಹಾಚಾರ್ ಹಾಗೂ ಆಡಳಿತಾಧಿಕಾರಿ ಮಾಧವಶೆಟ್ಟಿ ಇದ್ದರು.

Megha News