ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 353ನೇ ಆರಾಧನಾ ಮಹೋತ್ಸವ ನಿಮಿತ್ತ ಆ.18ರಿಂದ 24ರ ವರೆಗೆ ಸಪ್ತರಾತ್ರೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದ್ದಾರೆ.
ರಾಯರ ಆರಾಧನಾ ಕಾರ್ಯಕ್ರಮಕ್ಕೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ.
ಪ್ರತಿ ವರ್ಷ ಶ್ರೀರಾಘವೇಂದ್ರ ಅನುಗ್ರಹ ವಿಶೇಷ ಪ್ರಶಸ್ತಿಯನ್ನು ಬೆಂಗಳೂರಿನ ಬಿಜಿಎಸ್ ಮತ್ತು ಎಸ್‌ಜೆಬಿಐಟಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶನಾಥ ಸ್ವಾಮೀಜಿ, ಮೈಸೂರಿನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.