ರಾಯಚೂರು. ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ವಿಶೇಷ ಕಾರ್ಯಾಚರಣೆ ಮಾಡಿ ದೋಷಪೂರಿತ ಕರ್ಕಶ ಶಬ್ದವನ್ನು ಉಂಟು ಮಾಡುವ ಸೈಲೆನ್ಸ ರ್‌ಗಳನ್ನು ಅಳವಡಿಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನಯ ನಾಶಪಡಿಸಿ, ಪ್ರಕರಣ ದಾಖಲಿಸಿ 2.50 ಸಾವಿರ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಿಖಿಲ್. ಬಿ ತಿಳಿಸಿದರು.
ಜಿಲ್ಲಾ ಪೋಲಿಸ್ ಕಚೇರಿ ಆವರಣದಲ್ಲಿ ಜಿಲ್ಲೆಯಲ್ಲಿ ವಿವಿಧ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ಕರ್ಕಶ ಶಬ್ದ ಉಂಟು ಮಾಡುವ ದ್ವಿಚಕ್ರ ವಾಹನಗಳನ್ನು ಸೈಲೆನ್ಸರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
380 ದ್ವಿಚಕ್ರ ವಾಹನ ಸವಾರರನ್ನು ಪತ್ತೆಹಚ್ಚಿ, ಅವರ ವಿರುದ್ಧ ಕಲಂ, 192(2) ಮೋಟಾರು ವಾಹನ ಕಾಯ್ದೆ ಅನ್ವಯ ಒಟ್ಟು 2,52 ಸಾವಿರ ದಂಡ ವಿಧಿಸಲಾಗಿದೆ. ದೋಷಪೂರಿತ ಸೈಲೆನ್ಸರ್ ಗಳನ್ನು ವಶಪಡಿಸಿಕೊಂಡು ರೋಡ್ ರೋಲರ್ ಹಾಯಿಸಿ ನಾಶಪಡಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಎಸ್‌ಪಿ ಶಿವುಕುಮಾರ ಹೆಚ್ಚುವರಿ ಎಎಸ್.ಪಿ, ಹರೀಶ, ಡಿಎಸ್‌ಪಿ ಸತ್ಯನಾರಾಯಣ ರಾವ್, ವಿವಿಧ ಪೋಲಿಸ್ ಠಾಣೆಗಳ ಸಿಪಿಐ, ಪಿಎಸ್‌ಐ ಸಿಬ್ಬಂದಿಗಳು ಇದ್ದರು.