ರಾಯಚೂರು. ಜಿಲ್ಲೆಯಲ್ಲಿ ಇತ್ತೀಚಿಗೆ ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋ ಮತ್ತು ನಾಲ್ಕು ಚಕ್ರಗಳ ವಾಹನ ಸವಾರರು ನಿಗದಿತ ಪ್ರಮಾಣಕ್ಕಿಂತಹ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುವುದಲ್ಲದೆ, ಅಪಾ ಯಕಾರಿ ರೀತಿಯಲ್ಲಿ ವಾಹನಗಳನ್ನು ಚಲಾಯಿಸಿ ಇತ್ತೀಚಿಗೆ ರಸ್ತೆ ಅಪಘಾತಗಳು ಉಂಟಾಗು ತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಮತ್ತು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಸ್ತೆ ಅಪಘಾತ ಗಳನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ಇಂದು ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ವಿಶೇಷ ಕಾರ್ಯಚರಣೆ ನಡೆಸಿ ಜಿಲ್ಲಾದ್ಯಂತ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಒಟ್ಟು 42 ಪ್ರಕರಣಗಳನ್ನು ದಾಖಲಿಸಲಾಗಿದೆ.
ಅಧಿಕಾರಿಗಳು ಶಾಲೆ ಬಿಡುವ ವೇಳೆಯಲ್ಲಿ ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಶಾಲೆಯ ಆಡಳಿತ ಮಂಡಳಿಯ ಸದಸ್ಯರಿಗೆ, ಶಾಲೆಯ ವಾಹನ ಚಾಲಕರಿಗೆ ಮತ್ತು ಆಟೋ ಚಾಲಕರಿಗೆ ಸಂಚಾರಿ ನಿಯಮವನ್ನು ಪಾಲಿಸು ವಂತೆ ಜಾಗೃತಿ ಮೂಡಿಸಲಾಗಿರುತ್ತದೆ.