ರಾಯಚೂರು: ದೇವದುರ್ಗ ತಾಲ್ಲೂಕಿನ ಕಾನ್‌ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ ಅವರ ಪುತ್ರ ಹಾಗೂ ಬೆಂಬಲಿಗರು ಮಾಡಿದ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡು ‘ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ, ರಕ್ಷಣೆ ಕೊಡಿ ಎಂದು ದೇವದುರ್ಗ ಪೋಲಿಸ್ ಠಾಣೆಯ 59 ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಅಕ್ರಮ ಮರಳು ಸಾಗಣೆ ಸಂಬಂಧಿಸಿದಂತೆ ಕಾನ್‌ಸ್ಟೆಬಲ್ ಹನುಮಂತರಾಯ ಹಾಗೂ ಶಾಸಕಿ ಕರೆಮ್ಮ ನಾಯಕ ಬೆಂಬಲಿಗರ ನಡುವೆ ನಡೆದ ವಾಗ್ವಾದದಲ್ಲಿ ಶಾಸಕಿಯ ಪುತ್ರ ಸಂತೋಷ ಹಾಗೂ ಆಪ್ತ ಸಹಾಯಕರಾದ ಇಲಿಯಾಸ್, ರಫಿ ಮತ್ತಿತರರು ಸೇರಿ ಹನುಮಂತರಾಯ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಠಾಣೆ ಮುಂದೆ ಧರಣಿ ಕುಳಿತು ಮೂವರು ಪೊಲೀಸರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಅಕ್ರಮ ಮರಳು ಸಾಗಣೆ ತಡೆಯಲು ಹೋದರೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಅಧಿಕಾರದ ದರ್ಪ ತೋರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.