ರಾಯಚೂರು. 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು.
ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಇಲಾಖೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರರು ನರಸಮ್ಮ ಮಾಡಗಿರಿ, ಗ್ರಾಮೀಣ ಶಾಸಕ ದದ್ದಲ್ ಬಸವನಗೌಡ, ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ, ಜಿಲ್ಲಾಧಿಕಾರಿ ನಿತೀಶ ಕೆ, ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಪಾಂಡ್ವೆ ತುಕಾರಾಂ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಸೇರಿದಂತೆ ಅನೇಕರು ಇದ್ದರು.