Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಗ್ರಾಮ ಪಂಚಾಯತ್‍ಗಳಲ್ಲಿ ತಿಂಗಳಿಡೀ ಸ್ವತಂತ್ರ್ಯ ದಿನಾಚರಣೆಯಂಗವಾಗಿ ವಿವಿಧ ಕಾರ್ಯಕ್ರಮಗಳು

ಗ್ರಾಮ ಪಂಚಾಯತ್‍ಗಳಲ್ಲಿ ತಿಂಗಳಿಡೀ ಸ್ವತಂತ್ರ್ಯ ದಿನಾಚರಣೆಯಂಗವಾಗಿ ವಿವಿಧ ಕಾರ್ಯಕ್ರಮಗಳು

ಬೆಂಗಳೂರು : ರಾಜ್ಯದ ಎಲ್ಲಾ ಗ್ರಾ.ಪಂಗಳ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಆಗಸ್ಟ್ ತಿಂಗಳ ಪೂರ್ತಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಕೈಗೊಳ್ಳುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದ್ದು, ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ‘ಓದುವ ಬೆಳಕು’ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.
ಸದರಿ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ.

ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಮಕ್ಕಳಿಗೆ ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಿ, ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಅದರಂತೆ, ಆಗಸ್ಟ್-2023ರ ಮಾಹೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪುಯುಕ್ತ ಗ್ರಂಥಾಲಯಕ್ಕೆ ಬರುವ ಮಕ್ಕಳಿಗೆ ಚಟುವಟಿಕೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.

Megha News