ರಾಯಚೂರು. ಜಿರಳೆ ಬಿದ್ದ ಹಾಲನ್ನು ಸೇವಿಸಿದ್ದರಿಂದ 20ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡ ಘಟನೆ ತಾಲೂಕಿನ ತಲಮಾರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ತಲಮಾರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಬೆಳಗ್ಗೆ ಮಕ್ಕಳಿಗೆ ಹಾಲು ನೀಡಲಾಗಿದೆ, ಹಾಲಿನಲ್ಲಿ ಜಿರಳೆ ಬಿದ್ದಿದ್ದರಿಂದ ಹಾಲನ್ನು ಸೇವಿಸಿದ 20ಕ್ಕೂ ಅಧಿಕ ಮಕ್ಕಳು ಅಸ್ವಸ್ಥ ಗೊಂಡಿದ್ದಾರೆ, ಮಾಹಿತಿ ತಿಳಿಯುತ್ತಿದ್ದಂತೆ ತಾಲೂಕ ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ತಕ್ಷಣವೇ ಮಕ್ಕಳನ್ನು ಹತ್ತಿರದ ಇಡಪನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಮಕ್ಕಳನ್ನು ತಪಾಸಣೆ ಮಾಡಿಸಿ ಚಿಕಿತ್ಸೆ ಒದಗಿಸಿದೆ.
ಮಕ್ಕಳ ಪಾಲಕರು ಶಾಲೆಯ ಆಡಳಿತ ಮಂಡಳಿ ಹಾಗೂ ಅಡುಗೆ ಸಿಬ್ಬಂದಿಗಳು ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಜಿಲ್ಲಾ ಪಂಚಾಯತ ಸಿಇಒ ರಾಹುಲ್ ತುಕಾರಾಂ ಪಾಂಡೆ ಅವರು ತೆರಳಿ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
ಈ ಕುರಿತು ಇಡಪನೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.