ರಾಯಚೂರು. ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ (ಡಿಡಿಪಿಐ) ಕೆಡಿ ಬಡಿಗೇರ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾ ಖೆಯ ಸರ್ಕಾರದ ಆಧೀನ ಕಾರ್ಯದರ್ಶಿ (ಆಡಳಿತ) ಮಲ್ಲಿಕಾರ್ಜುನ ರಾಮಚಂದ್ರಪ್ಪ ಇವರು ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಪ್ರಭಾರಿ ವಹಿಸಿಕೊಂಡಿದ್ದ ಸುರೇಶ ಉಗ್ಗಿ ಅವರ ಸ್ಥಾನಕ್ಕೆ ಸರ್ಕಾರ ಕೊಪ್ಪಳ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕರಾಗಿದ್ದ ಹಾಗೂ ತತ್ಸಮಾನ ಹುದ್ದೆಯ ಅಧಿಕಾರಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಚಾರ್ಯರಾಗಿದ್ದ ಕೆಡಿ ಬಡಿಗೇರ್ ಅವರನ್ನು ರಾಯಚೂರು ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.