Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಬೆಳಗಾವಿಯ ಸುವರ್ಣಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬೆಳಗಾವಿಯ ಸುವರ್ಣಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಡಿಸೆಂಬರ್.7ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 07-12-2023ರ ಗುರುವಾರದಂದು ಸಂಜೆ 6 ಗಂಟೆಗೆ ಸಚಿವ ಸಂಪುಟದ 2023ನೇ ಸಾಲಿನ 15ನೇ ಸಭೆಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.

ಕಳೆದ ಸಚಿವ ಸಂಪುಟ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ವಹಿಸಿದ್ದಂತ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಹಿಂಪಡೆಯಲಾಗಿತ್ತು. ಡಿ.7ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಸಿಎಂ ಸಿದ್ಧರಾಮಯ್ಯ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

Megha News