ರಾಯಚೂರು.ವಿಶೇಷ ಚೇತನರಿಗಾಗಿ ಸರ್ಕಾರದಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅವುಗಳನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡೆದುಕೊಳ್ಳಲು ವಿಶೇಷಚೇತನರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಹೇಳಿದರು.
ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಅಭಿವೃದ್ಧಿಗೆ ಶ್ರಮಿಸುತ್ತಿರುವ ವಿವಿಧ ಸಂಘ ಸಂಸ್ಥೆಗಳು, ಒಕ್ಕೂಟಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಶಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳನ್ನು ಸಮಾಜದಲ್ಲಿರುವ ಎಲ್ಲಾ ವಿಶೇಷಚೇತನರಿಗೆ, ಸಾರ್ವಜನಿಕರಿಗೆ ಮುಟ್ಟಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಯೋಜನೆಗಳನ್ನು ಸಾರ್ವಜನಿಕರು ಮತ್ತು ವಿಶೇಷಚೇತನರಿಗೆ ಮುಟ್ಟಿಸುವಲ್ಲಿ ಯಾವುದೇ ನ್ಯೂನ್ಯತೆಗಳು ಕಂಡುಬಂದಲ್ಲಿ ಅವುಗಳನ್ನು ಸರಿಪಡಿಸಲು ಸೂಲ್ರ ಕ್ರಮ ಕೈಗೊಂಡು ವಿಕಲಚೇತನರ ಬೇಡಿಕೆಗಳನ್ನು ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಎಂದು ತಿಳಿಸಿದರು.
ಇದೇ ವೇಳೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ಮಾತನಾಡಿ, ವಿಶೇಷ ಚೇತನರಿಗೆ ಸರ್ಕಾರದಿಂದ ಹಲವು ಸೌಕರ್ಯಗಳನ್ನು ನೀಡಲಾಗುತ್ತಿದ್ದು, ವಿಶೇಷ ಚೇತನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಮತದಾನದ ಹಕ್ಕು ಪಡೆದುಕೊಳ್ಳಬೇಕು. ಮತ್ತು ಮತಗಟ್ಟೆಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ವಿಶೇಷಚೇತನರಿಗಾಗಿ ಹಲವು ಸೌಲಭ್ಯಗಳನ್ನು ನೀಡಲಾಗಿದೆ ವಿಶೇಷಚೇತನರು ಈ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಶೇಷಚೇತನ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ವಿಕಲಚೇತನರ ಕಲ್ಯಾಣಾಧಿಕಾರಿ ಶರಣಬಸವ ಪಾಟೀಲ್, ಶಿಶು ಅಭಿವೃದ್ಧಿ ಅಧಿಕಾರಿ ಮನ್ಸೂರ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.