ರಾಯಚೂರು. ಚಿಕ್ಕಮಗಳೂರು ವಕೀಲರ ಸಂಘದ ಸದಸ್ಯರ ಮೇಲೆ ಪೊಲೀಸರು ನಡೆಸಿದ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ನ್ಯಾಯಾಲಯದಿಂದ ಜಿಲ್ಲಾಧಿ ಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿಗಳು ಇಲ್ಲದೇ ಇರುವುದರಿಂದ ಮನವಿ ನೀಡದೇ ಹಿಂತಿರುಗಿದರು.
ನಂತರ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಪೋಲಿಸರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಕೀಲರ ಮೇಲೆ ಪೊಲೀಸರು ದೌರ್ಜನ್ಯ ಮಾಡಿ ರುವುದು ಕಾನೂನು ಬಾಹಿರ. ಜನಸಾಮಾನ್ಯರಿಗೆ ರಕ್ಷಣೆ ನೀಡುವ ಪೊಲೀಸರು ಧೋರಣೆಯನ್ನು ಖಂಡಿಸಿದರು. ಇಂತಹ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಸಬೇಕು’ ಎಂದು ಆಗ್ರಹಿಸಿದರು.
ವಕೀಲರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ನೇರವಾಗಿ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ, ಇವರು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಭಾವನೆ ವ್ಯಕ್ತವಾಗುತ್ತದೆ. ಪೊಲೀಸರ ಈ ವರ್ತನೆ ಕಾನೂನು ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಗೃಹ ಸಚಿವರು ಇಂತಹ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.