ರಾಯಚೂರು. ನಾಗರಿಕ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ನಗರದ ಒಟ್ಟು 16 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿಯಲಿರುವ ಪ್ರಯುಕ್ತ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
200 ಮೀಟರ್ ಸುತ್ತುವರೆದ ಪ್ರದೇಶ ವ್ಯಾಪ್ತಿ ಯಲ್ಲಿ ಈ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಯಾರಿಗೂ ಪ್ರವೇಶವಿಲ್ಲ, ಕೇಂದ್ರಗಳ ಸುತ್ತಮುತ್ತ ಲಿನ ಎಲ್ಲಾ ಝರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷೆ ಸಮಯದಲ್ಲಿ ಕಡ್ಡಾಯವಾಗಿ ಬಂದ್ ಮಾಡಬೇಕು ಎಂದು ಜಿಲ್ಲಾ ನ್ಯಾಯಿಕ ದಂಡಾಧಿಕಾರಿ ತಿಳಿಸಿದ್ದಾರೆ.
ಡಿಇಎಲ್ಇಡಿ: ಡಿ.11 ರಿಂದ 16ರವರೆಗೆ ಡಿಇಎಲ್ಇಡಿ ಪ್ರಥಮ ಮತ್ತು ದ್ವಿತೀಯ ಪೂರಕ ಪರೀಕ್ಷೆಗಳು ಯರಮರಸ್ ಡಯಟ್ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಪ್ರಯುಕ್ತ ಡಿ.10ರಿಂದ 16ರವರೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.