ರಾಯಚೂರು. ಕಳೆದ ಅಕ್ಟೋಬರ್‌ನಲ್ಲಿ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗಾಗಿ ಕೆಇಎ ಪರೀಕ್ಷೆಯನ್ನು ನಡೆಸಿತ್ತು. ಈ ವೇಳೆ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳು ಸಿಕ್ಕಿ ಬಿದ್ದು ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಇದೀಗ ಡಿ.10ರಂದು ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಯುತ್ತಿರುವುದರಿಂದ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಬಾರಿ ಇಎನ್‌ಟಿ ವೈದ್ಯರಿಂದಲೇ ಪರೀಕ್ಷಾರ್ಥಿಗಳ ಕಿವಿಗಳ ತಪಾಸಣೆ ಮಾಡಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಡಿ.10ರಂದು ಲಿಖಿತ ಪರೀಕ್ಷೆ ನಡೆಯುತ್ತಿದೆ. ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ಸಮಯವನ್ನು ನಿಗದಿಪಡಿಸಲಾಗಿದೆ.
ರಾಯಚೂರಿನ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ತೀವ್ರ ತಪಾಸಣೆ ಮಾಡಲಾಗುತ್ತಿದೆ. ರಾಯಚೂರು ರಿಮ್ಸ್ ಆಸ್ಪತ್ರೆಯ ಇಎನ್‌ಟಿ ವೈದ್ಯರಿಂದಲೇ ಪರೀಕ್ಷಾರ್ಥಿಗಳ ಕಿವಿಗಳ ತಪಾಸಣೆ ಮಾಡಲಾಗುತ್ತಿದೆ. ಸುಮಾರು 16 ಪರೀಕ್ಷಾ ಕೇಂದ್ರಗಳಲ್ಲಿ ರಿಮ್ಸ್ ವೈದ್ಯರ ನೇಮಕ ಮಾಡಲಾಗಿದೆ. ಪರೀಕ್ಷಾ ಕೊಠಡಿಗೆ ತೆರಳುವ ಮುಂಚಿತವಾಗಿ ಕಿವಿಯಲ್ಲಿ Otoscope ಮೂಲಕ ತೀವ್ರ ತಪಾಸಣೆ ಮಾಡಲಾಗಿದೆ. ಇನ್ನು ಮಹಿಳೆಯರ ಬ್ಯಾಂಗಲ್, ಕಾಲಗೆಜ್ಜೆಯನ್ನು ಪೊಲೀಸರು ತೆಗೆಸಿದ್ದಾರೆ