ರಾಯಚೂರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಲಿಂಗಸೂಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿಯಲ್ಲಿ ಕೂಡಲಸಂಗಮ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ
ಇಷ್ಪಲಿಂಗ ಪೂಜೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಬೇಕು ಎಂದು ಹಂತ ಹಂತವಾಗಿ ಹೋರಾಟ ನಡೆಸಿದ್ದು ಇದೀಗ 6 ನೇ ಹಂತದ ರಾಜ್ಯ ಹೆದ್ದಾರಿ ತಡೆ ಪ್ರತಿಭಟನೆಗೆ ಚಾಲನೆ ನೀಡಿದ್ದಾರೆ, ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ರಸ್ತೆಯ ಮೇಲೆಯೇ ಇಷ್ಟಲಿಂಗ ಪೂಜೆ ಮಾಡಿದರು. ರಸ್ತೆಯಲ್ಲಿ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ಮಾಡಿದ್ದರಿಂದ ರಸ್ತೆಯುದ್ದಕ್ಕೂ ವಾಹನಗಳ ನಿಂತಿದ್ದುಣ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಇದರಿಂದ
ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಷ್ಟಲಿಂಗ ಪೂಜೆ ನಡೆಸುವ ಮೂಲಕ ಹೋರಾಟ ನಡೆಸಿ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ ಎಂದು ತಿಳಿಸಿದರು.