ವಿಜಯಪುರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶಕುನಿ ಇದ್ದ ಹಾಗೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಏನು ಹೇಳುತ್ತಾರೋ ಅದು ಉಲ್ಟಾ ನಡೆದಿರುತ್ತದೆ’ ಅಂತಾ ಟೀಕಿಸಿದ್ದಾರೆ.
ಈ ಹಿಂದೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು. ಯತ್ನಾಳ್ ಅವರು ವಿಪಕ್ಷ ನಾಯಕರಾಗಲು ನಮ್ಮ ಅಭ್ಯಂತರವಿಲ್ಲವೆಂದು ಬಿವೈ ವಿಜಯೇಂದ್ರ ಹೇಳಿದ್ದರು. ಅಷ್ಟರಲ್ಲಿ ಹೈಕಮಾಂಡ್ ಬಳಿ ಎಲ್ಲಾ ಮಾತನಾಡಿಕೊಂಡು ಬಂದಿದ್ದರು. ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು ಏನೂ ನಡೆಯುತ್ತಿಲ್ಲ’ವೆಂದು ಹೇಳಿದ್ದಾರೆ.
ಯಡಿಯೂರಪ್ಪ ಭಾನುವಾರ ಹೇಳಿಕೆ ನೀ ಡಿದ್ದಾರೆ. ಈಗಾಗಲೇ ನನ್ನ ವಿರುದ್ಧ ಹೈಕಮಾಂಡ್ ಬಳಿ ದೂರು ಕೊಟ್ಟಿದ್ದಾರೆ. ತಮ್ಮ ಮರ್ಯಾದೆ ಹೋಗಬಾರದು ಅಂತಾ ದೂರು ನೀಡಿಲ್ಲವೆಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯತ್ನಾಳ್ 3ನೇ ಟಿಪ್ಪು ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿರುವ ಅವರು, ‘ನಾನು 3ನೇ ಟಿಪ್ಪು ಆದರೆ ಎಂ.ಬಿ.ಪಾಟೀಲ್ 4ನೇ ಟಿಪ್ಪು ಸುಲ್ತಾನ್ ಎಂದಿದ್ದಾರೆ. ಹಿಜಾಬ್ ಆದೇಶ ವಾಪಸ್ ಎಂಬ ಸಿಎಂ ಸಿದ್ದರಾಮಯ್ಯರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಇದೇ ರೀತಿ ಡ್ರೆಸ್ ಇರಬೇಕೆಂದು ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಎಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ. ಇಡಿ ದೇಶದಲ್ಲಿ ಎಲ್ಲಿಯೂ ಈ ವಿಷಯ ಇಲ್ಲ, ಕರ್ನಾಟಕದಲ್ಲಿ ಯಾಕೆ? ಇದು ಇವರೇ ತೆಗೆದಿದ್ದು, ಈ ವಿಚಾರ ಕಾಂಗ್ರೆಸ್ಗೆ ಲೋಕಸಭೆಯಲ್ಲಿ ನಿಶ್ಚಿತವಾಗಿ ಮುಳುವಾಗುತ್ತದೆ’ ಅಂತಾ ಎಚ್ಚರಿಕೆ ನೀಡಿದರು.