ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಕಳೆದ ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಒಟ್ಟು 1042 ಗಂಟಲು ದ್ರವ ಮಾದರಿಗಳನ್ನು ಪರಿಕ್ಷೆ ಮಾಡಲಾಗಿ ಒಟ್ಟು 16 ಜನರಿಗೆ ಕೋವಿಡ್ ಪಾಸಿಟೀವ್ ಎಂದು ವರದಿಯಾಗಿರುತ್ತದೆ. ಇದರಲ್ಲಿ 14 ಜನರು ಹೋಂ ಕ್ವಾರೆಂಟೆನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಉಳಿದ ಇಬ್ಬರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಈ ಹಿನ್ನಲೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜ.6ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ ಮುಂಜಾಗೃತಾ ಸಭೆಯ ಅಧ್ಯಕ್ಷತೆ ಚಹಿಸಿ ಮಾತನಾಡಿ, ಕೋವಿಡ್ ಗೆ ಸಂಬಂಧಪಟ್ಟಂತೆ ರಿಮ್ಸ್ ಆಸ್ಪತ್ರೆ ಮತ್ತು ಎಲ್ಲಾ ತಾಲೂಕ ಮಟ್ಟದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ವ್ಯವಸ್ಥೆ ಮಾಡಿಕೊಳ್ಳಬೇಕು. ಕೋವಿಡ್ ಸೋಂಕಿತರ ಆಸ್ಪತ್ರೆಯಲ್ಲಿ ದಾಖಲಾದಾಗ ಯಾವುದೇ ಸಮಸ್ಯೆಗಳಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಭಯಪಡುವ ಅಗತ್ಯವಿಲ್ಲ ಮುಂಜಾಗ್ರತೆ ವಹಿಸಬೇಕು. ಕೋವಿಡ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳಿದರು.
60 ಮೇಲ್ಪಟ್ಟ ವಯೋ ವೃದ್ದರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು, ನೆಗಡಿ ಕೆಮ್ಮಿನಂತ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರಿಕ್ಷೆ ಮಾಡಿಸಿಕೊಳ್ಳಬೇಕು. ಧೀರ್ಘ ಕಾಲದಿಂದ ಚಿಕಿತ್ಸೆ ಪಡೆಯುವವರು ಹೊರಗಡೆ ಹೋಗುವಾಗ ಮಾಸ್ಕ ಧರಿಸಬೇಕು. ಯಾವುದೇ ಸಾಮಾರಂಭ ಮತ್ತು ಗುಂಪು ಸೇರುವ ಜನಜಾಂಗುಗಳಿಗಳಿಗೆ ಹೋಗುವ ಸಂಧರ್ಭದಲ್ಲಿ ಮಾಸ್ಕ ಧರಿಸುವುದು ಸೇರಿದಂತೆ ಇನ್ನಿತರ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು, ರಿಮ್ಸ್ ಭೋಧಕ ಆಸ್ಪತ್ರೆಯ ನಿರ್ದೇಶಕ ಡಾ.ರಮೇಶ, ರಿಮ್ಸ್ ಬೋಧಕ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ತಾಲೂಕು ಆರೋಗ್ಯ ಅಧಿಕಾರಿ ಡಾ.ಶಾಖೀರ್ ಮೊಯಿನುದ್ದೀನ್, ನವೋಧಯ ವೈದ್ಯಕೀಯ ಸಂಸ್ಥೆಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ರಾಯಚೂರು ಹಾಗೂ ಇನ್ನು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.