ರಾಯಚೂರು.ಹಿಟ್ ಅಂಡ್ ರನ್ ಪ್ರಕರಣ ಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯ ಮ ಜಾರಿ ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ರಾಜ್ಯದಲ್ಲಿ ಇಂದಿನಿಂದ ಲಾರಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮುಷ್ಕರಕ್ಕೆ ಬೆಂಬಲಿ ಸುವಂತೆ ಒತ್ತಾಯ ಪೂರ್ವಕವಾಗಿ ಆಟೋ, ಟ್ಯಾಕ್ಸಿಗಳನ್ನು ನಿಲ್ಲಿಸಿ ಬಡಿಗೆಗಳನ್ನು ಇಡಿದು ರಸ್ತೆಗೆ ಇಳಿದಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಸ್ತೆಯಲ್ಲಿ ತೆರಳುತ್ತಿರುವ ಆಟೋ ಮತ್ತು ಕ್ರಷರ್ ಟ್ಯಾಕ್ಸಿಗಳನ್ನು ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ.
ನಗರದಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾ ಡುವ ಕಾರ್ಮಿಕರು ತೆರಳುತಿರುವ ವಾಹನವನ್ನು ತಡೆದು ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ, ಲಾರಿ ಮುಷ್ಕರ ಹಿನ್ನೆಲೆ ಲಾರಿ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸಬೇಕು, ಆದರೆ ಸಾರ್ವಜನಿಕ ಸಂಚಾರಕ್ಕೆ ತೆರಳಿವ ವಾಹನಗಳನ್ನು ತೆಡೆದು ತೊಂದರೆ ಉಂಟು ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ.
ಬಡಿಗೆಯನ್ನು ಹಿಡಿದುಕೊಂಡು ಬೆದರಿಕೆ ಹಾಕುವ ಮೂಲಕ ಆಟೋ ಮತ್ತು ಟ್ಯಾಕ್ಸಿಗಳನ್ನು ತಡೆದು ಬಂದ್ ಪ್ರತಿಭಟನೆ ಮುಂದಾಗಿದ್ದಾರೆ.