ಸಿರವಾರ: 26 ಜನ ವಕೀಲರನ್ನು ನೇಮಿಸಿ ರಾಮಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರಸ್‌ನವರು ಇದೀಗ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಬಗ್ಗೆ ಅಪಸ್ವರ ಎತ್ತುವ ಮೂಲಕ ತಮ್ಮ ಹಿಂದೂ ವಿರೋಧಿ ನಿಲುವನ್ನು ಮತ್ತೊಮ್ಮೆ ಬಹಿರಂಗ ಪಡಿಸಿದ್ದಾರೆ ಎಂದು ನಮೋ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಪಟ್ಟಣದಲ್ಲಿ ನಮೋ ಬ್ರಿಗೇಡ್‌ನಿಂದ ಬುಧವಾರ ಹಮ್ಮಿಕೊಂಡಿದ್ದ ‘ನಮೋ ಭಾರತ, ಈಗ ಶುರುವಾಗಿದೆ ಭಾರತದ ಕಾಲ’ ಕಾರ್ಯಕ್ರಮದಲ್ಲಿ ಮಾತನಾಡಿದರು,
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಜಕಾರಣಿ ಹೇಗಿರಬೇಕು ಎನ್ನುವುದಕ್ಕೆ ಮೇಲ್ಪಂಕ್ತಿ ಹಾಕಿದ್ದಾರೆ’,26 ಜನ ವಕೀಲರನ್ನು ನೇಮಿಸಿ ರಾಮಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರಸ್‌ನವರು ಇದೀಗ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಬಗ್ಗೆ ಅಪಸ್ವರ ಎತ್ತುವ ಮೂಲಕ ತಮ್ಮ ಹಿಂದೂ ವಿರೋಧಿ ನಿಲುವನ್ನು ಮತ್ತೊಮ್ಮೆ ಬಹಿರಂಗ ಪಡಿಸಿದ್ದಾರೆ. ಮೋದಿ ಮತ್ತು ಹಿಂದುತ್ವದ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಅವರಿಗೆ ಇಲ್ಲ. ನಾಲ್ಕು ದಿನ ಪಾದಯಾತ್ರೆ ನಡೆಸಿ ಮಸಾಜ್ ಮಾಡಿಸಿಕೊಳ್ಳಲು ಥಾಯ್ಲೆಂಡಿಗೆ ಹೋಗುವವರಿಂದ ನೈತಿಕತೆಯ ಪಾಠ ಬೇಡ’ ಎಂದು ಹರಿಹಾಯ್ದರು.
‘ಕಾಂಗ್ರೆಸ್ ಮುಖಂಡ ಚಿದಂಬರಂ, ದೇಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರು ವಿದೇಶದ ಕೋವಿಡ್-19 ಲಸಿಕೆ ಬಗ್ಗೆ ಒಲವು ತೋರಿದ್ದರು. ರಕ್ಷಣಾ ಮಾಫಿಯಾ, ಡ್ರಗ್ ಮಾಫಿಯಾ, ನಕಲಿ ನೋಟು ಮತ್ತಿತರ ಮಾಫಿಯಾಗಳು ಪ್ರಧಾನಿ ಮೋದಿಯನ್ನು ಸೋಲಿಸಲು ಒಂದಾಗಿವೆ. ದೇಶದ ಜನರಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಮೋದಿ ಗೆಲುವಿಗೆ ಜನ ಸಾಮಾನ್ಯರು ಪಣ ತೊಡಬೇಕು’ ಎಂದು ಹೇಳಿದರು.