ರಾಯಚೂರು. ಹತ್ತು ಜನರ ಗುಂಫೊಂದು ಓರ್ವ ವ್ಯಕ್ತಿಯನ್ನು ಎಳೆದಾಡಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಸಿಂಧನೂರು ತಾಲೂಕಿನ ಚಿಕ್ಕಬೆರಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹಿಳೆಯ ಬಗ್ಗೆ ಕೆಟ್ಟದಾಗಿ ಮಾತ ನಾಡಿದ್ದಾನೆ ಎಂದು ಆರೋಪಿಸಿ ಗುಂಪು ವ್ಯಕ್ತಿ ಮೇಲೆ ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮ ದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ 53 ವರ್ಷದ ನಿಂಗಪ್ಪನನ್ನು ಪುರುಷರ ಗುಂಪೊಂದು ಥಳಿಸುತ್ತಿರುವುದು ಕಂಡುಬಂದಿದೆ.
ಸಂತ್ರಸ್ತೆ ತನ್ನನ್ನು ಬಿಡುವಂತೆ ದಾಳಿಕೋರರಲ್ಲಿ ಮನವಿ ಮಾಡಿದರೂ, ಆರೋಪಿಗಳು ಆತನನ್ನು ಹಗ್ಗದಿಂದ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಈ ಘಟನೆ ಜನವರಿ 20ರಂದು ನಡೆದಿದೆ. ಆತನ ಪತ್ನಿ ನಾಗಮ್ಮ ರಕ್ಷಿಸಲು ಯತ್ನಿಸಿದಾಗ ಆಕೆಯ ಮೇಲೂ ಚಪ್ಪಲಿ, ದೊಣ್ಣೆಗಳಿಂದ ಥಳಿಸಿ, ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ನಿಂಗಪ್ಪ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಚಿಕಿತ್ಸೆಗಾಗಿ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ತುರ್ವಿಹಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಒಂಬತ್ತು ಪುರುಷರ ಮೇಲೆ ಐಪಿಸಿ ಸೆಕ್ಷನ್ 342 143, 147, 506, ಮತ್ತು ದೌರ್ಜನ್ಯ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಇತರ ಎಂಟು ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ.