ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿಯಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಕೇಸರಿ ಧ್ವಜವನ್ನು ಅವಮಾನಿಸುವ ರೀಲ್ ಅಪ್ಲೋಡ್ ಮಾಡಿದ ನಂತರ ಗುಂಪೊಂದು ಆತನನ್ನು ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದೆ. ರೀಲ್ನಲ್ಲಿ ಯುವಕ ಕೇಸರಿ ಧ್ವಜವನ್ನು ಹಿಡಿದಿದ್ದು ಅದರ ಮೇಲೆ ಹಿಂದೂ ಧಾರ್ಮಿಕ ಚಿಹ್ನೆ ‘ಓಂ’ ಎಂದು ಬರೆಯಲಾಗಿದೆ.
ರೀಲ್ಸ್ ಕಂಡು ಕೋಪಗೊಂಡ ಜನರು ಮೇದಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅವರನ್ನು ಕಂಡು ಥಳಿಸಿದ್ದಾರೆ. ಇದನ್ನು ವಿಡಿಯೋ ಕೂಡ ಮಾಡಲಾಗಿದೆ. ವೀಡಿಯೋದಲ್ಲಿ ಗುಂಪು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುತ್ತಾ ಮುಸ್ಲಿಂ ಯುವಕನನ್ನು ಥಳಿಸಿ, ಆತನನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ.
ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಯ ವಿರುದ್ಧ ಗ್ರಾಮಸ್ಥರು ದೂರು ದಾಖಲಿಸಿದ್ದರು. ಆತನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 153(ಎ), 295-ಎ, 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನ್ನ ಮೇಲೆ ಹಲ್ಲೆ ನಡೆಸಿದ ಗ್ರಾಮಸ್ಥರ ವಿರುದ್ಧ ಮುಸ್ಲಿಂ ಯುವಕ ದೂರು ದಾಖಲಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯರ ವಿರುದ್ಧ ಐಪಿಸಿ ಸೆಕ್ಷನ್ 341, 323, 505(2), ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.