ರಾಯಚೂರು. ರಾಷ್ಟ್ರದ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿರುವ ಘಟನೆ ತಾಲೂಕಿನ ಮಿರ್ಜಾಪೂರ ಗ್ರಾಮದ ಉನ್ನತಿಕರಿಸಿದ ಸರಿಕಾರಿ ಹಿರಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ತಾಲೂಕಿನ ಮಿರ್ಜಾಪೂರ ಗ್ರಾಮದಲ್ಲಿ ಇಂದು 75ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಗಿದೆ.
ಶಾಲೆಯ ಮುಖ್ಯ ಗುರು ವಸಂತ ಕುಮಾರಿ ಅವರು ಬೆಳಗ್ಗೆ ಧ್ವಜಾರೋಹಣ ನೆರವೇರಿಸಿದ್ದು ಸಂಜೆ ಧ್ವಜಾರೋಹಣವನ್ನು ಇಳಿಸಬೇಕು, ಆದರೆ ಧ್ವಜವನ್ನು ಇಳಿಸದೇ ಅದಕ್ಕೆ ಅಪಮಾನ ಮಾಡಿದ್ದಾರೆ. ಶಾಲೆಯ ಆವರಣದಲ್ಲಿ ರಾತ್ರಿವಯಾದರೂ ಧ್ವಜವನ್ನು ಇಳಿಸದೇ ಅಪಮಾನ ಮಾಡಲಾಗಿದೆ.
ಧ್ವಜಕ್ಕೆ ಅಪಮಾನ ಮಾಡಿದ ಘಟನೆಗೆ ಸಾರ್ವಜ ನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಹಾಗೆಯೆ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿರುವ ಶಾಲೆಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.