ರಾಯಚೂರು: ನಿಗಮ ಮಂಡಳಿ ನೇಮಕ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಭಿನ್ನಮತ ಶುರುವಾಗಿದೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನ ಸಿಂಧ ನೂರು ಶಾಸಕ ಹಂಪನಗೌಡ ಬಾದರ್ಲಿ ಪರೋ ಕ್ಷವಾಗಿ ತಿರಸ್ಕರಿಸಿದ್ದಾರೆ.
ನಾವು ಜಿಲ್ಲೆಯಲ್ಲಿ ನಾಲ್ವರು ಶಾಸಕರಿದ್ದೇವೆ, ಆದರೆ ಯಾರಿಗೂ ಸಚಿವ ಸ್ಥಾನ ಕೊಟ್ಟಿಲ್ಲ. ನಮಗೆ ಮಂತ್ರಿಸ್ಥಾನ ಕೊಡ್ತಾರೋ ಇಲ್ವೋ ತಿಳಿಸಬೇಕು. ನಾನು ಸಿಎಂ ಹಾಗೂ ಡಿಕೆ ಶಿವಕುಮಾರ್ ಜೊತೆ ಈ ಬಗ್ಗೆ ಚರ್ಚೆ ಮಾಡ್ತೇನೆ ಎಂದಿದ್ದಾರೆ.
ನಿನ್ನೆ 34 ಶಾಸಕರಿಗೆ ವಿವಿಧ ನಿಮಗ ಮಂಡಳಿಗ ಳನ್ನು ಕೊಟ್ಟು ಸರ್ಕಾರದ ಆದೇಶವನ್ನು ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಅದರಲ್ಲಿ ರಾಯಚೂರು ಜಿಲ್ಲೆಗೆ ಮೂವರು ಶಾಸಕರನ್ನು ನೇಮಕ ಮಾಡಿದ್ದಾರೆ. ಈ ವಿಚಾರವಾಗಿ ನಾವು ನಮ್ಮ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿದ ಬಳಿಕ ಹೇಳ್ತೀವಿ ಎಂದು ಹಂಪನಗೌಡ ಬಾದರ್ಲಿ ತಿಳಿಸಿದ್ದಾರೆ.