ಮಾನವಿ. ಸಾರಿಗೆ ಬಸ್ ಮತ್ತು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ನೀರಮಾನ್ವಿ
ಹತ್ತಿರ ನಡೆದಿದೆ.
ಮೃತಪಟ್ಟಿರುವ ಬೈಕ್ ಸವಾರ ರವಿ (25) ಮೃತ ಯುವಕ ಎಂದು ಗುರುತಿಸಲಾಗಿದೆ.
ಮಾನವಿಯಿಂದ ರಾಯಚೂರು ಕಡೆಗೆ ಹೋಗುತ್ತಿದ್ದ ಬಸ್ ಎದರಿಗೆ ಬರುತಿದ್ದ ಪಲ್ಸರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಬೈಕ್ ಸವಾರ ರವಿ ಮೃತಪಟ್ಟಿದ್ದಾನೆ.
ಮೃತದೇಹವನ್ನು ಸರ್ಕಾರಿ ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೃತ ರವಿ ಸಿರವಾರ ಪಟ್ಟಣದಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡಿಕೊಂಡಿದ್ದ, ಕಳೆದ 8 ತಿಂಗಳಷ್ಟೆ ಮದುವೆಯಾಗಿದ್ದ ಎಂದು ತಿಳಿದು ಬಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.