Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

18 ವಿದ್ಯಾರ್ಥಿಗಳಲ್ಲಿ ಮಂಗನ ಬಾವು ಪತ್ತೆ ಗ್ರಾಮಸ್ಥರು ಆತಂಕ

18 ವಿದ್ಯಾರ್ಥಿಗಳಲ್ಲಿ ಮಂಗನ ಬಾವು ಪತ್ತೆ ಗ್ರಾಮಸ್ಥರು ಆತಂಕ

ರಾಯಚೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಂಗನ ಕಾಯಿಲೆಗೆ ಅಲ್ಲಿನ ಜನ ಭಯದಲ್ಲೇ ಕಾಲಕಳೆಯುತ್ತಿದ್ದಾರೆ. ಇದೀಗ ರಾಯಚೂರು ಜಿಲ್ಲೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದೆ.

ರಾಯಚೂರಿನ ಲಿಂಗಸೂಗೂರು ತಾಲೂಕಿನ ನೀರಲಕೇರೆ ಗ್ರಾಮದ ಹಿರಿಯ ಪ್ರಾಥಮಿಕ ‌ಶಾಲೆಯ 18 ಮಕ್ಕಳಲ್ಲಿ ಮಂಗನ ಬಾವು ರೋಗ ಪತ್ತೆ ಆಗಿದೆ.ಈ ರೋಗ ಪತ್ತೆಯಾದ ಹಿನ್ನೆಲೆ ಕೂಡಲೇ ಅಲರ್ಟ್‌ ಆದ ಆರೋಗ್ಯ ಇಲಾಖೆ ಶಾಲೆಯಲ್ಲಿ ಸುಮಾರು 302 ಮಕ್ಕಳ ಆರೋಗ್ಯ ತಪಾಸಣೆ ಮಾಡಿದ್ದಾರೆ. ಅದರಲ್ಲಿ 18 ಮಕ್ಕಳಗೆ ಮಂಗನ ಕಾಯಿಲೆ ಇರುವುದು ಕಂಡುಬಂದಿದೆ. ಕೂಡಲೇ ವೈದ್ಯರ ತಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ರಾಜ್ಯದ ಮಲೆನಾಡು ಭಾಗದಲ್ಲಿ ಸದ್ಯ 37 ಜನರಿಗೆ ಅಂಟಿದ್ದೂ 24 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೂ ಇನ್ನೂಳಿದ 13 ಜನ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗನ ಕಾಯಿಲೆಯು ಜನರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸಿದೆ.
ಮಂಗನಬಾವು ಚಳಿಗಾಲದಲ್ಲಿ ಹೆಚ್ಚಾಗುವ ಈ ಸೋಂಕು, ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲ ಆದ್ದರಿಂದ ಜ್ವರ ಮತ್ತು ನೋವನ್ನು ಕಡಿಮೆ ಮಾಡಲು ಮಾತ್ರ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

Megha News