ರಾಯಚೂರು. ನಗರದ ಡಾ.ಭಾಲ್ಕಿ ಆಸ್ಪತ್ರೆಯ ಕೆಳಗಡೆ ಇರುವ ಖಜಾರಿಯಾ ಟೈಲ್ಸ್ ಅಂಗಡಿಯ (ಗೋಡೋನ್) ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು, ಅಂಗಡಿಯಲ್ಲಿನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ನಗರದ ಗೋಶಾಲೆ ರಸ್ತೆಯಲ್ಲಿ ನಡೆದಿದೆ.
ಕಟ್ಟಡಕ್ಕೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿದ್ದರಿಂದ ದಟ್ಟ ಹೋಗೆಯುವ
ಮೇಲ್ಮಹಡಿಯಲ್ಲಿರುವ ಭಾಲ್ಕಿ ಆಸ್ಪತ್ರೆಗೆ ಆವ ರಿಸಿದೆ ಇದರಿಂದ ಆತಂಕ ವಾತಾವರಣ ಉಂಟಾಗಿತ್ತು.
ಎಚ್ಚೆತ್ತುಕೊಂಡ ಆಸ್ಪತ್ರೆಯ ಸಿಬ್ಬಂದಿಗಳು ಒಳ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿ ಸಿದ್ದಾರೆ. ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದರಿಂದ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಬೆಂಕಿ ಅವಘಡದಿಂದ ಟೈಲ್ಸ್ ಅಂಗಡಿಯಲ್ಲಿನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಸ್ಥಳಕ್ಕೆ ಸದರ್ ಬಜಾರ್ ಠಾಣೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದರು.
ಈ ಕುರಿತು ಸದರ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.