ರಾಯಚೂರು : ರಾಯಚೂರಿಗೆ ಬಿಜೆಪಿ ಪರ ಪ್ರಚಾರಕ್ಕೆ ತೆಲುಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಏಪ್ರಿಲ್ 17ರ ಬದಲಾಗಿ ಏಪ್ರಿಲ್ 18 ರಂದು ನಿಗದಿಯಾಗಿದೆ.
ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಪ್ರಚಾರ ನಡೆಸಿ ರ್ಯಾಲಿ ನಡೆಸಲಿದ್ದಾರೆ. ಇದೇ ವೇಳೆ ಅಭ್ಯರ್ಥಿಯಾದ ರಾಜಾ ಅಮರೇಶ್ವರ್ ನಾಯಕ್ ಅವರು ನಾಮಪತ್ರ ಸಲ್ಲಿಸುವಲ್ಲಿಯೂ ಜೊತೆಯಾಗಿ
ನಟ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ನಡೆಸಲು ಮುಂದಾಗಿದ್ದಾರೆ.
ಎ.18 ರಂದು ರಾಯಚೂರಿನಲ್ಲಿ ರ್ಯಾಲಿ ನಡೆಸಿ ಬಂತರ ಬಳ್ಳಾರಿಗೆ ತೆರಳಲಿದ್ದಾರೆ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸುವ ಮೂಲಕ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
ಗಡಿ ಜಿಲ್ಲೆ ರಾಯಚೂರು ಆಂಧ್ರಪ್ರದೇಶದ ಜೊತೆ ನಂಟು ಹೊಂದಿದ್ದರಿಂದ, ತೆಲುವು ಭಾಷೆ ಅಭಿ ಮಾನಿಗಳು ಹಾಗೂ ನಟ ಪವನ್ ಕಲ್ಯಾಣ ಅಭಿ ಮಾನಿಗಳು ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಪರ ಪ್ರಚಾರ ನಡೆಸುವ ಮೂಲಕ ಮತದಾರರನ್ನಯ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.
ನಟ ಪವನ್ ಕಲ್ಯಾಣ್ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿ ಮತದಾರರನ್ನು ಸೆಳೆಯಲಿದ್ದಾರೆ.
ಎಪ್ರೀಲ್ 18 ರಂದು ಬೆಳಗ್ಗೆ 10:45ಕ್ಕೆ ನಗರದ ಯರಮರಸ್ ಹೆಲಿಪ್ಯಾಡ್ಗೆ ಆಗಮಿಸಿ, ನಾಮಪತ್ರ ಸಲ್ಲಿಕೆಗೆ ಜೊತೆಯಾಗಿ ನಂತರ ಗಂಜ್ ವೃತ್ತದಿಂದ ಆರ್ಟಿಒ ವೃತ್ತದವರೆಗೆ ರೂಡ್ ಶೋ ನಡೆಸಲಿದ್ದಾರೆ. ನಂತರ ಬಳ್ಳಾರಿ ಜಿಲ್ಲೆಗೆ ತೆರಳಲಿದ್ದಾರೆ.