ರಾಯಚೂರು. ಜಿಂದಾಬಾದ್ ಜಿಂದಾಬಾದ್ ರವಿಸಾಬ್ ಜಿಂದಾಬಾದ್ ಎಂದು ಘೋಷಣೆಯ ವಿಡಿಯೋ ತುಣುಕುಗಳನ್ನು ಯಾರೋ ಕಿಡಿ ಗೇಡಿಗಳು ತಿರುಚಿ ಪಾಕಿಸ್ತಾನ್ ಜಿಂದಾಬಾದ್ ರವಿಸಾಬ ಜಿಂದಾಬಾದ್ ಅಂತಾ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಮೇಲ್ನೋ ಟಕ್ಕೆ ಕಂಡು ಬಂದಿದೆ, ಎರಡು ವಿಡಿಯೋ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾ ಲಯಕ್ಕೆ ತನಿಖೆಗೆ ಕಳುಹಿಸಿ ಕೊಡಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅವರು ತಿಳಿಸಿದ್ದಾರೆ.
ಮೇ.30, 2024 ರಂದು ಸಂಜೆ 6 ಗಂಟೆಗೆ ನಗರ ದ ನಿಜಲಿಂಗಪ್ಪ ಕಾಲೋನಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಬಾಬ ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಪ್ರಚಾರ ಮಾಡುತ್ತಿದ್ದರು, ಅದೇ ಸಮಯಕ್ಕೆ ಕಾಂಗ್ರೆಸ್ ಯುವ ಮುಖಂಡ ರವಿ ಭೋಸರಾಜ ಸ್ಥಳಕ್ಕೆ ಬಂದಿದ್ದರಿಂದ ಅವರನ್ನು ಕಾರ್ಯಕರ್ತರು ಮೇಲಕ್ಕೆ ಎತ್ತಿಕೊಂಡು ಜಿಂದಾ ಬಾದ್ ಜಿಂದಾಬಾದ್ ರವಿಸಾಬ್ ಜಿಂದಾಬಾದ್ ಎಂದು ಘೋಷಣೆ ಕೂಗಿ ಪ್ರಚಾರವನ್ನು ಮಾಡಿದರು.
ಈ ಘೋಷಣೆಯ ವಿಡಿಯೋ ತುಣುಕುಗಳನ್ನು ಯಾರೋ ಕಿಡಿಗೇಡಿಗಳು ತಿರುಚಿ ಪಾಕಿಸ್ತಾನ್ ಜಿಂದಾಬಾದ್ ರವಿಸಾಬ ಜಿಂದಾಬಾದ್ ಅಂತಾ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಬಾಬು ಅವರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ, ಕಲಂ 295(ಎ), 505(2) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಗೆ ಸಂಬಂಧಸಿದಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದ ವಿಡಿಯೋ ತುಣುಕು ಮತ್ತು ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಕೂಗಿ ದ್ದಾರೆ ಎನ್ನಲಾಗುವ ವಿಡಿಯೋ ತುಣುಕುಗಳನ್ನು ಪ್ರಾಥಮಿಕ ವಿಚಾರಣೆಯಲ್ಲಿ ಪರಿಶೀಲಿಸಲಾಗಿ ಅದರಲ್ಲಿ ಜಿಂದಾಬಾದ್ ಜಿಂದಾಬಾದ್ ರವಿಸಾಬ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ವಿಡಿಯೋ ತುಣುಕುಗಳನ್ನು ಸಂಗ್ರಹಿಸಿ ಸತ್ಯಾ ಸತ್ಯತೆ ಪರಿಶೀಲಿಸಿ ವರದಿ ನೀಡಲು ವಿಧಿ ವಿಜ್ಞಾನ ಪ್ರಯೋಗಲಾಯಕ್ಕೆ ಕಳುಹಿಸಿಕೊಡಲಾಗಿದೆ ತಿಳಿಸಿದ್ದಾರೆ.