ರಾಯಚೂರು. ಕಳೆದ ರಾತ್ರಿ ಸುರಿದ ಬಾರೀ ಮಳೆಗೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು ಮಾರಾಟಕ್ಕೆ ತಂದಿದ್ದ ಉತ್ಪನ್ನಗಳಿಗೆ ನೀರು ನುಗ್ಗಿದ ಪರಿಣಾಮ ನೀರಿನಲ್ಲಿ ಒದ್ದೆಯಾಗಿದೆ.
ಕಳೆದ ರಾತ್ರಿಇಡೀ ಸುರಿದ ಮಳೆಗೆ ರೈತರು ತತ್ತರಿಸಿದ್ದಾರೆ.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು ಮಾರಾಟಕ್ಕೆ ತಂದಿದ್ದ ಭತ್ತವು ನೀರುಪಾಲಾಗಿವೆ,
ಎಪಿಎಂಸಿ ಪ್ರಾಂಗಣದಲ್ಲಿ ಹಾಕಿದ್ದ ಭತ್ತದ ರಾಶಿಗಳಿಗೆ ಮಳೆ ನೀರಿಗೆ ಹರಿದು ಒದ್ದೆಯಾಗಿ ನಷ್ಟ ಉಂಟಾಗಿದೆ.
ಎಪಿಎಂಸಿ ಪ್ರಾಂಗಣದಲ್ಲಿ ಟೀನ್‌ಶೆಡ್‌ನಿಂದ ಮಳೆ ನೀರು ಹರಿದು ಪ್ರಾಂಗಣದಲ್ಲಿ ಭತ್ತಕ್ಕೆ ನುಗ್ಗಿವೆ, ಇದರಿಂದಾಗಿ ರಾತ್ರಿಯೆಲ್ಲಾ ಸುರಿದ ಮಳೆಯಿಂದ ರೈತರ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ.
ಎಪಿಎಂಸಿ ಪ್ರಾಂಗಣದಿಂದ ನೀರನ್ನು ರೈತರು ಹಾಗೂ ಹಮಾಲರು ಹೊರಹಾಕುತ್ತಿದ್ದಾರೆ. ನಗರ ಸೇರಿದಂತೆ ತಾಲೂಕಿನಾದ್ಯಂತವಾಗಿ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿವೆ.ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ಥಗೊಂಡಿದೆ.
ಗ್ರಾಮೀಣ ಭಾಗದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿದಿವೆ. ಉತ್ತಮ ಮಳೆಯಾಗಿದ್ದರಿಂದ ರೈತರಲ್ಲಿ ಸಂತಸ ಮೂಡಿದೆ.