Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

3 ತಿಂಗಳೊಳಗಾಗಿ ಮಿಮ್ಸ್ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಗಳು ಪೂರ್ಣಗೊಳ್ಳಬೇಕು: ಡಾ ಶರಣ್ ಪ್ರಕಾಶ್ ಆರ್. ಪಾಟೀಲ್

3 ತಿಂಗಳೊಳಗಾಗಿ ಮಿಮ್ಸ್ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಗಳು ಪೂರ್ಣಗೊಳ್ಳಬೇಕು: ಡಾ ಶರಣ್ ಪ್ರಕಾಶ್ ಆರ್. ಪಾಟೀಲ್

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್ ) ಆವರಣದಲ್ಲಿ ನಿರ್ಮಾಣವಾ ಗುತ್ತಿರುವ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಗಳು 3 ತಿಂಗಳೊಳಗಾಗಿ ಪೂರ್ಣಗೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್ ಪಾಟೀಲ್ ಅವರು ತಿಳಿಸಿದರು.

ಅವರು ಮಿಮ್ಸ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.ಕ್ಯಾನ್ಸರ್ ಆಸ್ಪತ್ರೆಯ ಸಿವಿಲ್ ಕಾಮಗಾರಿಗಳು ಒಂದು ತಿಂಗಳೊಳಗೆ ಪೂರ್ಣಗೊಳಿಸವೇಕು. ಆಸ್ಪತ್ರೆಗೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಿತರೆ ಟೇಬಲ್, ಚೇರ್, ಬೆಡ್ ವಿದ್ಯುತ್ ಸಂಪರ್ಕ ಇತ್ಯಾಧಿ ಕೆಲಸಗಳು 3 ತಿಂಗಳೊಳಗೆ ಪೂರ್ಣಗೊಳ್ಳಬೇಕು. ಅಷ್ಟರಲ್ಲಿ ಆಸ್ಪತ್ರೆಗೆ ಬೇಕಿರುವ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆದು ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಂ.ಆರ್.ಐ ಹಾಗೂ ಸಿ.ಟಿ ಸ್ಕ್ಯಾನ್ ಆದ ನಂತರ ರೋಗಿಗಳ ವರದಿ ನೀಡಲು ಮೂರ ರಿಂದ ಐದು ದಿನ ಆಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಖಾಲಿ ಇರುವ ರೆಡಿಯಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿ ಟೆಲಿ ಸರ್ವಿಸ್ ಉಪಯೋಗಿಸಿಕೊಂಡು ಒಂದು ದಿನದೊಳಗಾಗಿ ವರದಿ ನೀಡುವ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೊರ ಗುತ್ತಿಗೆ ಮೇಲೆ ಲ್ಯಾಬ್ ಸೇವೆ ಒದಗಿಸುತ್ತಿರುವ ಸಂಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೆಚ್ಚಿನ ದರ ವಿದಿಸುತ್ತಿದ್ದಾರೆ ಎಂದು ದೂರು ಕೇಳಿ ಬರುತ್ತಿದ್ದು, ಇದನ್ನು ಪರಿಶೀಲಿಸಿ ತಪ್ಪು ಕಂಡು ಬಂದಲ್ಲಿ ಟೆಂಡರ್ ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳ ಖಾತೆಗೆ ಸರಿಯಾಗಿ ಸಂಬಳ, ಪಿ‌ಎಫ್ ಜಮೆಯಾಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ. ಇದರ ಬಗ್ಗೆ ದೂರುಗಳು ಕೇಳಿಬಂದಲ್ಲಿ ಶಿಸ್ತು ಕ್ರಮ ವಹಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ವೈದ್ಯರು ತಮ್ಮಕಾಲೇಜಿನ ಕೆಲಸ ನಿರ್ವಹಿಸಬೇಕಿರುವ ಸಮಯದಲ್ಲಿ ಹೊರಗೆ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳಲ್ಲಿ ಕಾರ್ಯನಿರ್ವಹಿಸುವಂತಿಲ್ಲ, ಕಂಡುಬಂದರೆ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ಇನ್ನು ಮುಂದೆ ಮಧ್ಯಾಹ್ನದ ವೇಳೆ ಸಹ ಈ ಹಾಜರಾತಿ ಸಂಗ್ರಹಿಸಲು ತಿಳಿಸಲಾಗುವುದು ಎಂದರು.
ಶಾಸಕ ಪಿ.ರವಿಕುಮಾರ್ ಅವರು ಮಾತನಾಡಿ ಬಿ.ಹೊಸೂರಿನಲ್ಲಿ ನರ್ಸಿಂಗ್, ಪ್ಯಾರ್ ಮೆಡಿಕಲ್ ಕಾಲೇಜು ಮತ್ತು ಹಾಸ್ಟಲ್ ಗೆ ಸ್ಥಳದ ವ್ಯವಸ್ಥೆ ಮಾಡಿಕೊಡಲಾಗುವುದು. ಇದಕ್ಕೆ ಯೋಜನೆ ರೂಪಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ವರ್ಚುಯಲ್ ಡಿಸೆಕ್ಸನ್ ಟೇಬಲ್ ಗೆ ಚಾಲನೆ: ವೈದ್ಯಕೀಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2.50 ಕೋಟಿ ರೂ ವೆಚ್ಚದಲ್ಲಿ ಖರೀದಿಸಲಾಗಿರುವ ಅನಾಟಮಿ ವರ್ಚುಯಲ್ ಡಿಸೆಕ್ಸನ್ ಟೇಬಲ್ (Anatomy virtual dissection table) ಗೆ ಸಚಿವರು ಚಾಲನೆ ನೀಡಿದರು.
ಸಭೆಯ ನಂತರ ಸಚಿವರು ಮಿಮ್ಸ್ ಆಸ್ಪತ್ರೆಯ ವಾಡ್೯ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾದ ಎ ಬಿ ರಮೇಶ್ ಬಂಡಿಸಿದ್ದೇಗೌಡ,ವಿಧಾನ ಪರಿಷತ್ ಶಾಸಕರಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ ಕುಮಾರ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ: ಸುಜತಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Megha News