ರಾಯಚೂರು. ಪೊಲೀಸ್ ಪೋಲಿಸ್ ವರಿ ಷ್ಠಾಧಿಕಾರಿ ಬಿ. ನಿಖಿಲ್ ಅವರನ್ನು ಕೋಲಾರಕ್ಕೆ ವರ್ಗಾವಣೆಯಿಂದಾಗಿ ತೆರವಾದ ಸ್ಥಾನಕ್ಕೆ ಬೆಂಗಳೂರಿನ ವಿಶೇಷ ತನಿಖಾ ದಳ ತಂಡದ ಲೋಕಾಯುಕ್ತರಾಗಿದ್ದ ಎಂ ಪುಟ್ಟಮಾದಯ್ಯ ಇವರನ್ನು ನೇಮಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು 25 ಭಾರತೀಯ ಪೊಲೀಸ್ ಸೇವೆಗಳ (ಐಪಿಎಸ್) ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿತ್ತು.
ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್. ಅವರನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿದ್ದು, ತೆರವಾಗಿದ್ದ ಸ್ಥಾನಕ್ಕೆ ಪ್ರಸ್ತುತ ಬೆಂಗಳೂರಿನ ವಿಶೇಷ ತನಿಖಾ ದಳ ತಂಡದ ಲೋಕಾಯುಕ್ತರಾಗಿದ್ದ ಎಂ ಪುಟ್ಟಮಾದಯ್ಯ ಇವರನ್ನು ರಾಯಚೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.