Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಗುರು ಪೂರ್ಣಿಮಾ ನಿಮಿತ್ತ ಶ್ರೀ ಸಾಯಿ ಮಂದಿರದಲ್ಲಿ ವಿಶೇಷ ಪೂಜೆ

ಗುರು ಪೂರ್ಣಿಮಾ ನಿಮಿತ್ತ ಶ್ರೀ ಸಾಯಿ ಮಂದಿರದಲ್ಲಿ ವಿಶೇಷ ಪೂಜೆ

ರಾಯಚೂರು. ನಗರದ ಶ್ರೀ ಸಾಯಿ ಬಾಬಾ ಮಂದಿರದಲ್ಲಿ ಗುರು ಪೂರ್ಣಿಮಾ ನಿಮಿತ್ತ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿದವು. ಗುರು ಪೂರ್ಣಿಮೆಯು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ನಡೆಯಿತು.

ಶ್ರೀ ಸಾಯಿ ಮಂದಿರದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಕ್ಷೀರಭಿಷೆಕ ಮಾಡಿ ಬಾಬಾ ಅವರ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದರು.
ಸಾಯಿ ಬಾಬಾ ಮಂದಿರದಲ್ಲಿ ಪ್ರತಿವರ್ಷದಂತೆ
ಈ ವರ್ಷವೂ ಸಹ ಗುರುಪೂರ್ಣಿಮಾ ಮಹೋ ತ್ಸವನ್ನು ಏರ್ಪಡಿಸಲಾಗಿತ್ತು.
ಬೆಳಗ್ಗೆಯಿಂದಲೇ ಅಭಿಷೇಕ, ಕ್ಷೀರಭಿಷೇಕ, ನೆರವೇರಿಸಲಾಯಿತು. ನಂತರ ಮಹಾ ಮಂಗಳಾರತಿ ನಡೆಯಿತು ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಏರ್ಪಡಿಸಲಾಗಿತ್ತು.
ಸಾಯಿ ಮಂದಿರದಲ್ಲಿ ಸಂಜೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.
ಈ ವೇಳೆ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಅವರು ಶ್ರೀ ಸಾಯಿ ಮಂದಿರಕ್ಕೆ ತೆರಳಿ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶ್ರೀಸಾಯಿ ಮಂದಿರದ ಸಂಸ್ಥಾಪಕ ಅಧ್ಯಕ್ಷ ಸಾಯಿ ಕಿರಣ ಆದೋನಿ, ಜಿ.ಶಿವ ಮೂರ್ತಿ, ವೀರೇಶ ನಾಯಕ ಸೇರಿದಂತೆ ಅನೇಕರು ಇದ್ದರು.

Megha News