Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local News

ಸ್ವಾತಂತ್ರೋತ್ಸವ ದಿನಾಚರಣೆ, ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಿ: ಶಿವಪ್ಪ ಯಲ್ಲಪ್ಪ ಭಜಂತ್ರಿ

ಸ್ವಾತಂತ್ರೋತ್ಸವ ದಿನಾಚರಣೆ, ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಿ: ಶಿವಪ್ಪ ಯಲ್ಲಪ್ಪ ಭಜಂತ್ರಿ

ರಾಯಚೂರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಬೇಕಾಗುವ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವ ಮೂಲಕ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಪ್ಪ ಯಲ್ಲಪ್ಪ ಭಜಂತ್ರಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮದಿAದ ಆಚರಿಸುವ ನಿಟ್ಟಿನಲ್ಲಿ ರಚಿಸಲಾದ ವಿವಿಧ ಸಮಿತಿಗಳ ಸಿದ್ದತೆ ಕುರಿತು ಚರ್ಚಿಸಿದರು. ಯಾವುದೇ ರೀತಿಯ ಅಡೆತಡೆಯಾಗದಂತೆ ಎಲ್ಲ ರೀತಿ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಪ್ಲಾಸ್ಟಿಕ್ ಧ್ವಜ ಬಳಕೆ ನಿಷೇಧಿಸಲಾಗಿದ್ದು, ಮಾರಾಟವಾಗದಂತೆ ನಿಗಾವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆಗಸ್ಟ 15ರಂದು ಬೆಳಿಗ್ಗೆ 9ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಜಹಣಸಂಬಂಧಿಸಿದಂತೆಿದ್ದು, ಪೋಲಿಸ್, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡ ಒಳಗೊಂಡAತೆ ಆಕರ್ಷಕ ಪಥಸಂಚಲನ ಹಮ್ಮಿಕೊಳ್ಳಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ದೇಶಭಕ್ತಿ ಗೀತೆ ಹಾಡಿಸಲು ತಂಡಗಳನ್ನು ಆಯ್ಕೆ ಮಾಡಲು ತಿಳಿಸಿದರು.
ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗೆ ವಹಿಸಿದ ಜವಾಬ್ದಾರಿಯನ್ನು ತಪ್ಪದೇ ಪಾಲಿಸಬೇಕು. ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಲು ಸೂಚಿಸಿದ ಅವರು ಧ್ವಜಾರೋಹಣ ವ್ಯವಸ್ಥೆ, ಬಂದೂಬಸ್ತಿನ ವ್ಯವಸ್ಥೆ ಸ್ವಚ್ಛತೆ ವ್ಯವಸ್ಥೆಗಳ ಕುರಿತು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಕ್ರೀಡಾಂಗಣದಲ್ಲಿ ಸ್ಟೇಜ್ ನಿರ್ಮಾಣ, ಗಣ್ಯರಿಗೆ, ಶಾಸಕರಿಗೆ, ಸಂಸದರುಗಳಿಗೆ ಹಾಗೂ ಸನ್ಮಾನಿತರಿಗೆ, ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಮಕ್ಕಳಿಗೆ ಸಹಿ ವಿತರಣೆ ಕ್ರಮವಹಿಸಬೇಕು. ವೇದಿಕೆ ಮೇಲೆ ಗಣ್ಯವ್ಯಕ್ತಿಗಳಿಗೆ ಆಸನಗಳ ವ್ಯವಸ್ಥೆ ಹಾಗೂ ವೇದಿಕೆಯ ಎರಡು ಕಡೆಗಳಲ್ಲಿ ಅಧಿಕಾರಿಗಳಿಗೆ, ಸನ್ಮಾನಿತರಿಗೆ ಹಾಗೂ ಪತ್ರಕರ್ತರಿಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಕಡ್ಡಾಯ;* ಸರ್ಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ ಜನವರಿ 26ರ ಗಣರಾಜ್ಯೋತ್ಸವ ದಿನದೊಂದು ಹಾಗೂ ಆಗಸ್ಟ್-15ರ ಸ್ವಾತಂತ್ರ‍್ಯ ದಿನಾಚರಣೆಯಂದು ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚನೆ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಕಡ್ಡಾಯವಾಗಿ ಇಡುವಂತೆ ಅಪರ ಜಿಲ್ಲಾಧಿಕಾರಿಗಳು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಹಂಪಣ್ಣ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಜಗದೀಶ್ ಗಂಗಣ್ಣನವರು, ಪಶು ಸಂಗೋಪನಾ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕ ಡಾ.ಅಶೋಕ ಕೊಲಕಾರ, ರಾಯಚೂರು ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯ ಸ್ವಾಮಿ, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಯರಾಮಯ್ಯ, ಕಾರ್ಮಿಕ ಇಲಾಖೆಯ ಅಧಿಕಾರಿ ಆರತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Megha News