ರಾಯಚೂರು. 78ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ವೈದ್ಯಕೀಯ ಶಿಕ್ಷಣ, ಉದ್ಯಮಶೀಲತೆ, ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ ಪಾಟೀಲ್ ಧ್ವಜಾರೋಹಣ ನೆರವೇರಿಸಿದರು.
ನಗರದ ಮಹಾತ್ಮಗಾಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ಧಿ, ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ ಪಾಟೀಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು,
ದೇಶದ ನಾಗರಿಕರಾಗಿ ಭವ್ಯ ಪರಂಪರೆ ಸಂಸ್ಕೃತಿ ಇವುಗಳನ್ನು ಉಳಿಸಿ ಬೆಳಸಿಕೊಂಡು ಹೋಗುವತ್ತ ನಾವೆಲ್ಲರೂ ಯೋಚಿಸಬೇಕಾಗಿದೆ, ಜಾತಿ, ಭಾಷೆ, ಪಂಗಡಗಳ ಸಂಕುಚಿತ ಭಾವನೆಯಿಂದ ಹೊರಬಂದು ಸ್ನೇಹ ಮತ್ತು ಸೌಹಾರ್ದತೆಯ ವಾತಾವರಣ ನಿರ್ಮಿಸಿ ದೇಶದ ಒಗ್ಗಟ್ಟು ಮತ್ತು ಐಕ್ಯತೆ ಯನ್ನು ಕಾಪಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವ ದಿಕ್ಕಿನಲ್ಲಿ ನಾವು ಒಟ್ಟಾಗಿ ಸೇರಿ ಶ್ರಮಿಸೋಣ ಎಂದರು.