ರಾಯಚೂರು. ಕೇಂದ್ರದ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಸಾರ್ವವಜನಿಕರು ಮತ್ತು ಪ್ರವಾಸಿಗರೆ ಪ್ರವಾಸೋದ್ಯಮ ತಾಣಗಳನ್ನು ಆಯ್ಕೆ ಮಾಡಲು ದೇಖೋ ಅಪನಾ ದೇಶ-ಪೀಪಲ್ ಚಾಯಿಸ್ 2024 ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲೆಯ ಜನತೆ ಇದರಲ್ಲಿ ಸಕ್ರಿಯವಾಗಿ ಭಾಗವಹಿಸಿ ರಾಯಚೂರು ಜಿಲ್ಲೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಬೇಕೆಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ ಕೆ. ಅವರು ಮನವಿ ಮಾಡಿದ್ದಾರೆ.
ಸಾರ್ವಜನಿಕರು ಮತ್ತು ಪ್ರವಾಸಿಗರು https://innovationindia.mygov.in/dekho-apna-desh/ ಇಲ್ಲಿಗೆ ಭೇಟಿ ನೀಡಿ ಸೆಪ್ಟೆಂಬರ್ 15ರೊಳಗೆ ತಮ್ಮ ಆಯ್ಕೆಯನ್ನು ಖಚಿತಪಡಿಸುವ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತಂತೆ ವೋಟ್ ಮಾಡುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಜಿಲ್ಲೆಯ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇ ರಿಸಲು ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಐತಿಹಾಸಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ ಮೇಲ್ದರ್ಜೆಗೇರಿಸುವ ಉದ್ದೇಶ ಹೊಂದಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಂದ್ರ ಜಲ್ದಾರ್ ಅವರು ತಿಳಿಸಿದ್ದಾರೆ.