ರಾಯಚೂರು. ವಿಮಾನ ನಿಲ್ದಾಣ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಂಡು ಯಾವುದೇ ಅಡಚಣೆಯಾಗದಂತೆ ಕೆಲಸ ಪ್ರಾರಂಭಿಸಬೇಕೆಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರ ಅದ್ಯಕ್ಷತೆಯಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು, ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಜಂಟಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವರುಗಳು ಅಧಿಕಾರಿಗಳೊಂದಿಗೆ ಕೂಲಂಕುಶವಾಗಿ ಚರ್ಚಿಸಿದರು.
ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಅನುಮತಿ ಪಡೆಯಲು ಅಗತ್ಯ ಕ್ರಮ ಕೈಗೊಂಡು ವಿಮಾನ ನಿಲ್ದಾಣಕ್ಕೆ ಯಾವುದೇ ಅಡಚಣೆ ಬಾರದಂತೆ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಪ್ರಾರಂಭಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ರಾಯಚೂರು ಸಂಸದರಾದ ಕುಮಾರ ನಾಯಕ್, ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕುಮಾರ್, ಮೂಲಭೂತ ಸೌಕರ್ಯ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ರಾದ ಖುಷ್ಬೂ ಚೌಧರಿ ಉಪಸ್ಥಿತರಿದ್ದರು.