ರಾಯಚೂರು. ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ನಗರಸಭೆ ಹಾಗೂ ಜಿಲ್ಲಾ ಯಾದವ ಸಮಾಜದ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತ್ಯೋತ್ಸವ ರಥ ಯಾತ್ರೆಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವ ಎನ್ಎಸ್ ಬೋಸರಾಜು ಅವರು ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಮೆರವಣಿಗೆ ಚಾಲನೆ ನೀಡಿದರು.
ಮೆರವಣಿಗೆಯು ನಗರದ ವಿವಿಧ ರಸ್ತೆಯಲ್ಲಿ ಸಂಚರಿಸಿ ಕೃಷ್ಣ ದೇವಸ್ಥಾನದವರೆಗೆ ನಡೆಯಿತು.
ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ಮಕ್ಕಳು ಕೃಷ್ಣ ರಾಧೆಯ ವೇಷ ಧರಿಸಿದ್ದು ಎಲ್ಲರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಜಯಣ್ಣ, ಕೆ ಶಾಂತಪ್ಪ, ತಿಮ್ಮಪ್ಪ ನಾಡಗೌಡ, ಜಿ ಶಿವ ಮೂರ್ತಿ, ರುದ್ರಪ್ಪ ಅಂಗಡಿ, ರಮೇಶ ಯಾದವ್ ಸೇರಿ ಅನೇಕರು ಉಪಸ್ಥಿತರಿದ್ದರು.