Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ರಾಯಚೂರು ರೈಲ್ವೇ ನಿಲ್ದಾಣಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಕಾಮಗಾರಿ ಪರಿಶೀಲನೆ

ರಾಯಚೂರು ರೈಲ್ವೇ ನಿಲ್ದಾಣಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಕಾಮಗಾರಿ ಪರಿಶೀಲನೆ

ರಾಯಚೂರು. ಭಾರತ ಸರ್ಕಾರದ ರೈಲ್ವೆ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯದಲ್ಲಿ ಕೇಂದ್ರ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ರಾಯಚೂರು ನಗರದ ರೈಲ್ವೇ ನಿಲ್ದಾಣಕ್ಕೆ ಭೇಟಿ, ನೀಡಿ ಭಾರತ್ ಸ್ಟೇಷನ್ ಕಾಮಗಾರಿಯನ್ನು ಪರಿಶೀಲನೆ ಮಾಡಿದರು.

ಈ ವೇಳೆ ಮಾತನಾಡಿ, ಅವರು ಕಾಮಗಾರಿಯು ಗುಣ್ಣಮಟ್ಟ ಹಾಗೂ ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳಿಸಬೇಕು. ನಗರದ ಬೇಡಿಕೆಗೆ ಅನುಗುಣವಾಗಿ ರೈಲು ನಿಲ್ದಾಣಗಳ ಮೂಲಸೌಕರ್ಯಗಳನ್ನು ಹೆಚ್ಚಿಸಿ, ಪ್ರಯಾಣಿಕರ ಸೌಕರ್ಯ, ಅನುಕೂಲ, ಸುರಕ್ಷತೆಗೆ ಆದ್ಯತೆ ನೀಡಲಾಗುವುದು. ಪಾರ್ಕಿಂಗ್, ಮಕ್ಕಳಿಗಾಗಿ ಆಟದ ವಲಯ, ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಸ್ಥಳಾವಕಾಶಗಳ ಇರಲಿದೆ.ಸಾರ್ವಜನಿಕರಿಂದ ಯಾವುದೇ ದೂರಗಳು ಬರದ ರೀತಿಯಲ್ಲಿ ನೋಡಿಕೊಳ್ಳಬೇಕು ಸ್ಥಳದಲ್ಲಿದ್ದ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಬಂಧಿಸಿದ ರೈಲ್ವೆ ಡಿಆರ್‌ಎಂ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಸಲಹಾ ಸಮಿತಿ ರಚಿಸಿ ಚರ್ಚಿಸಿ ಸ್ಥಳೀಯ ಮಟ್ಟದಲ್ಲಿ ಕೆಲ ತೀರ್ಮಾನಗಳನ್ನು ತಗೆದುಕೊಳ್ಳಬೇಕು. ಅವರಿಂದ ಸಲಹೆಗಳನ್ನು ಪಡೆದುಕೊಂಡರೆ ಜನರಿಗೆ ಇನ್ನಷ್ಟು ಅನುಕೂಲ ಆಗುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗಲಿದ್ದು, ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡದರು.
ಇದೇ ಸಂದರ್ಭದಲ್ಲಿ‌ ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ ಎಸ್.ಪಾಟೀಲ್, ಮಾಜಿ ಶಾಸಕರಾದ ಕೆ.ಶಿವನಗೌಡ ನಾಯಕ, ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ ಸೇರಿದಂತೆ ರೈಲ್ವೇ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ರೈಲ್ವೇ ಪೊಲೀಸ್ ಅಧಿಕಾರಿಗಳು ಇದ್ದರು.

Megha News