ರಾಯಚೂರು. ದೇಶದ ಶ್ರೀಮಂತ ಪರಂಪರೆಗೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದ್ದು, ಜಿಲ್ಲಾಡಳಿತ ವತಿಯಿಂದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ವಿಶ್ವಕರ್ಮ ಜಯಂತಿಯು ಇದೇ ಸೆ.17ರಂದು ನಡೆಯಲಿದ್ದು ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿದಂತೆ ಎಲ್ಲಾ ರೀತಿಯ ಸೌಕರ್ಯವನ್ನು ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು. ವೇದಿಕೆ, ಕುಡಿಯುವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಜಯಂತಿಗೆ ಎಲ್ಲಾ ಅಧಿಕಾರಿಗಳು ಹಾಜರಾಗಬೇಕು. ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಹಾಗೂ ಶಾಲಾ ಕಾಲೇಜು, ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು ಸೇರಿದಂತೆ ಸಮಾಜದ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.