ರಾಯಚೂರು. ಗೌರವಾನ್ವಿತ ಉಚ್ಚ ನ್ಯಾಯಲಯದ ನಿರ್ದೇಶನದಂತೆ ರಾಯಚೂರು ತಾಲೂಕಿನ ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆಯಲು ಸೆ.22ರಂದು ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಆ ಗ್ರಾಮದ ಭಕ್ತಾದಿಗಳು, ಸಾರ್ವಜನಿಕರು ಹಾಜರಾಗುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಮನವಿ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೀಠದ ಉಚ್ಚ ನ್ಯಾಯಾಲಯದಲ್ಲಿ ದಾಖಲಾ ಗಿರುವ ಪಿಟಿಷನ್ ಸಂಖ್ಯೆ;202656/2014ಕ್ಕೆ ಸಂಬಂಧಿಸಿದಂತೆ ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಯಾದಗಿರಿ ಜಿಲ್ಲಾಧಿಕಾರಿಯ ಕಚೇರಿಯ ಸಭಾಂಗಣದಲ್ಲಿ ಸಭೆ ಜರುಗಿಸಿ ಅಲ್ಲಿನ ಗ್ರಾಮದ, ಭಕ್ತಾದಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನು ಪಡೆದು ವರದಿಯನ್ನು ಸಲ್ಲಿಸುವಂತೆ ಸೂಚಿಸಿರುತ್ತಾರೆ.
ಈ ಮಠದ ಆಸ್ತಿ ನಿರ್ವಹಣೆಯ ಬಗ್ಗೆ ಅಭಿಪ್ರಾಯ ಪಡೆಯಲು ಸೆ.22ರ ಮಧ್ಯಾಹ್ನ 12ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅವಶ್ಯ ದಾಖಲೆಗಳೊಂದಿಗೆ ಸಂಬAಧಪಟ್ಟ ಅಧಿಕಾರಿಗಳು, ಮಠದ ಪೀಠಾಧಿಪತಿಗಳು, ಭಕ್ತಾದಿಗಳು ಹಾಗೂ ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಹಾಜರಾಗಲು ಯಾದಗಿರಿ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.