ರಾಯಚೂರು. ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ವತಿಯಿಂದ ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 6ನೇ ಸುತ್ತಿನ ಕಾಲು ಬಾಯಿ ರೋಗದÀ ಉಚಿತ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಇದೇ 2024ರ ಅಕ್ಟೋಬರ್ 21ರಿಂದ ನವಂಬರ್ 20ರವರೆಗೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಸಹಕರಿಸಿ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ತಿಳಿಸಿದ್ದಾರೆ.
ಅವರು ಅ.16ರ ಬುಧವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಿಬ್ಬಂದಿ ತಮ್ಮ ಹಳ್ಳಿಗೆ ಲಸಿಕೆ ಹಾಕಲು ಬಂದಾಗ ಎಲ್ಲಾ ರೈತ ಬಾಂಧವರು ತಮ್ಮಲ್ಲಿರುವ ಎಲ್ಲಾ ದನ ಮತ್ತು ಎಮ್ಮೆ ಮತ್ತು 3ತಿಂಗಳ ಮೇಲ್ಪಟ್ಟ ಕರುಗಳಿಗೆ ಲಸಿಕೆ ಹಾಕಿಸಿಕೊಂಡು ಈ ಸಾಂಕ್ರಾಮಿಕ ರೋಗದಿಂದಾಗುವ ಆರ್ಥಿಕ ನಷ್ಟವನ್ನು ತಪ್ಪಿಸಬೇಕು. ಅಲ್ಲದೆ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು.
ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೆಶಕರಾದ ಅಶೋಕ ಕೋಲಕಾರ್, ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ಇದ್ದರು.