ರಾಯಚೂರು.ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ತಹಶಿಲ್ದಾರ್ ಸುರೇಶ ವರ್ಮಾ ಅವರು ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ನಂತರ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಮೆರವಣಿಗೆಯು ನಗರದ ಅಂಬೇಡ್ಕರ್ ವೃತ್ತದಿಂದ ಸಾರ್ವಜನಿಕ ಉದ್ಯಾನವನದ ಮೂಲಕ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದವರೆಗೆ ನಡೆಯಿತು.
ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕ( ಅಪರಾಧ ವಿಭಾಗ) ಹರೀಶ, ನಗರಸಭೆ ಪೌರಾಯಕ್ತ ಗುರುಸಿದ್ದಯ್ಯ ಹಿರೇಮಠ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹಮದ್ ಜಿಲಾನಿ, ಪಿಎಸ್‌ಐ ಮಂಜುನಾಥ, ಬಾಬುರಾವ್ ಶೇಗುಣಿಸಿ, ದಂಡಪ್ಪ ಬಿರಾದಾರ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.